September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘ ಇದರ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16ರಂದು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ವಿಶ್ವಕರ್ಮ ಸಭಾಭವನಕ್ಕೆ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ರೂ.50 ಸಾವಿರದ ಚೆಕ್ ನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಪುಷ್ಪಾ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಕೋಶಾಧಿಕಾರಿ ಶ್ರೀಮತಿ ಆಶಾ ಸತೀಶ್ ಆಚಾರ್ಯ,ಸತೀಶ್ ಆಚಾರ್ಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya
error: Content is protected !!