April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ಧರ್ಮಸ್ಥಳ ಇದರ ಆಶ್ರಯದಲ್ಲಿ, ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮವು ಆ.17 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡಿದರು. ತುಮಕೂರು ಬೆಳ್ಳಾವಿ ಶ್ರೀ ಕಾರದೇಶ್ವರ ಮಠದ ಮಹಾಸ್ವಾಮೀಜಿ ಶ್ರೀ ಕಾರದ ವೀರಬಸವ ರವರು ಆಶೀರ್ವಚನ ನೀಡಿದರು.

ಜಾಗೃತಿ ಅಣ್ಣ/ಮಿತ್ರ ಪ್ರಶಸ್ತಿ ಪ್ರದಾನವನ್ನು ಶಾಸಕ ಹರೀಶ್ ಪೂಂಜ ಹಾಗೂ ಗುರುತಿನ ಚೀಟಿ ವಿತರಣೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ವಿತರಿಸಿದರು.

ಶ್ರೀ ಕ್ಷೇ.ಧ. ಗ್ರಾ, ಯೋ ಮುಖ್ಯ ಕಾರ್ಯನಿರ್ವಹಣಾರ್ಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಸಂಶೋಧಕರಾದ ಕೆ.ಎಂಸಿ ಮಣಿಪಾಲ ಆಸ್ಪತ್ರೆ ಡಾ| ಅಭಿಷೇಕ್ ಚತುರ್ವೇಧಿ, ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಮೇಖಲಾ ದಿವಾಕರ್ ರವರನ್ನು ಸ್ಮರಣಿಕೆ ನೀಡಿ ಸನ್ಮಾನಿಸಿ, ಆಶಯ ನುಡಿಗಳ್ನಾಡಿದರು.

ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಟ್ರಸ್ಟಿಗಳಾದ ಡಾ| ಪಿ.ವಿ. ಭಂಡಾರಿ, ಡಾ| ಶ್ರೀನಿವಾಸ್ ಭಟ್, ವಿ. ರಾಮಸ್ವಾಮಿ, ಬೆಳ್ತಂಗಡಿ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, , ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ ಉಪಸ್ಥಿತರಿದ್ದರು.

ಈ ವೇಳೆ ಪಾನಮುಕ್ತ ಗ್ರಾಮದ ಸಾಧಕರಾದ ಹೆಗ್ನುರು ಗ್ರಾಮದ ಗ್ರಾ.ಪಂ. ಅಧ್ಯಕ್ಷ ರಮೇಶ್ ರಾಮ ಗೌಡ, ಹುಕ್ಕಳ್ಳಿ ಗ್ರಾಮದ ಊರಿನ ಮುಖಂಡ ವಿನೋದ್ ಗೌಡ, ಕುಳ್ಳೆ ಗ್ರಾಮದ ಜನಜಾಗೃತಿ ಸದಸ್ಯ ಸುಭಾಷ್ ನಾಯ್ಕ್ ರವರನ್ನು ಗೌರವಿಸಲಾಯಿತು.

ಶ್ರೀಮತಿ ಸುಮಂಗಲ ಮತ್ತು ಯೋಜನೆಯ ಕೇಂದ್ರ ಕಛೇರಿಯ ಸಿಬ್ಬಂದಿಗಳು ಪ್ರಾರ್ಥಿಸಿದರು. ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯಸ್ ಸ್ವಾಗತಿಸಿ, ಅಖಿಲ ಕರ್ನಾಟಕ ಜನಜಾಗೃತಿ ಯೋಜನಾಧಿಕಾರಿಗಳಾದ ನಾಗೇಶ್ ವೈ.ಎ., ಭಾಸ್ಕರ್ ಎನ್ ಕಾರ್ಯಕ್ರಮ ನಿರೂಪಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ. ಕೊರವಿ ಧನ್ಯವಾದವಿತ್ತರು.

Related posts

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya
error: Content is protected !!