23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಆ.22 ರವರೆಗೆ ನಡೆಯಲಿದೆ.


ಆ.20 ರಂದು ಬೆಳಿಗ್ಗೆ 9 ಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ರವರಿಂದ ದೀಪ ಪ್ರಜ್ವಲನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಮ್.ಕೆ ಭಾಗವಹಿಸಲಿದ್ದಾರೆ.
ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಆ.21 ರಂದು ಸಭಾಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ, ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ನಾರಾಯಣ ಬೇಗೂರು ಬೆಂಗಳೂರು ಭಾಗವಹಿಸಲಿದ್ದಾರೆ. ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ರವರಿಗೆ ಗೌರವಾರ್ಪಣೆ ನಡೆಯಲಿದೆ. ಬೆಳಿಗ್ಗೆ ಗಂಟೆ ೧೦.೦೦ಕ್ಕೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ9 ರಿಂದ ತುಳು ಹಾಸ್ಯಮಯ ನಾಟಕ ಬೇಗ ಬಲ ಬಾಲೆ ನಾಟಕ ನಡೆಯಲಿದೆ.


ಆ.22 ರಂದು ಬೆಳಿಗ್ಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಭಕ್ತಿ ರಸಮಂಜರಿ, ಕುಣಿತ ಭಜನೆ ನಡೆಯಲಿದೆ ಎಂದು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ತಿಳಿಸಿದ್ದಾರೆ.

Related posts

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya
error: Content is protected !!