ಬೆಳ್ತಂಗಡಿ: ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿರ್ಮಿಸಿ ಪೂರ್ಣಗೋಳಿಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೊಳಪಡಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಜನಾಗ್ರಹ ಸಭೆ ಆ.19ರಂದು ಬೆಳ್ತಂಗಡಿ ನಗರ ಪಂಚಾಯತ್ ಬಳಿ ಜರುಗಿತು.
ಅಧ್ಯಕ್ಷತೆಯನ್ನು ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ವಹಿಸಿದ್ದರು.
ಸಿಪಿಎಂ ಮುಖಂಡ ಬಿ.ಎಂ ಭಟ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಜಿ.ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಸಿಪಿಎಂ ಮುಖಂಡ ಮುನೀರ್ ಕಾಟಿಪಳ್ಳ, ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಡಿ., ಜಿ.ಪಂ. ಮಾಜಿ ಸದಸ್ಯ ಸುಂದರ ಗೌಡ ಉಚ್ಚಿಲ, ಉಮ್ಮರ್ ಕುಂಞ ಮುಸ್ಲಿಯಾರ್, ವಂದನ ಭಂಡಾರಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಸಿಪಿಎಂ ಮುಖಂಡರಾದ ಈಶ್ವರಿ ಮತ್ತು ಶೇಖರ್ ಬಿ. ಶ್ರೀನಿವಾಸ ಕಿಣಿ ಮೊದಲಾದವರು ಉಪಸ್ಥಿತರಿದ್ದರು.
ನ್ಯಾಯವಾದಿ ಬಿ.ಎಂ ಭಟ್ ಸ್ವಾಗತಿಸಿದರು. ಶ್ಯಾಮರಾಜ್ ಕಾಯ೯ಕ್ರಮ ನಿರೂಪಿಸಿದರು.