April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ  ಆ.17 ರಂದು ನಡೆಯಿತು.
ಚೆಸ್ ಪಂದ್ಯಾಟವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಉದ್ಘಾಟಿಸಿದರು. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಾರಾ ಕೇಸರಿ, ಸ್ವಾಗತಿಸಿದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸುಜಯ, ತಾಲೂಕು ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿಗಳಾದ ರಮೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿಯ ಅಧ್ಯಕ್ಷ ಕೃಷ್ಣಾನಂದ ರಾವ್, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ  ಅಧ್ಯಕ್ಷ ರವಿರಾಜ್ ಗೌಡ ಹಾಗೂ ಉಪಾಧ್ಯಕ್ಷ‌ ಪಂಚಾಕ್ಷರಪ್ಪ, ಎಸ್ ಡಿ ಎಂ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಾಬ್ದಿಕ್ ವರ್ಮಾ ಇವರನ್ನು ಸನ್ಮಾನಿಸಲಾಯಿತು.
ಗೇರುಕಟ್ಟೆ ಶಾಲೆಯ ದೈಹಿಕ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ಎಸ್ ಡಿ ಎಂ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಸ್ ಜೈನ್ ವಂದಿಸಿದರು.

Related posts

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!