25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ತಾಲ್ಲೂಕು ಕಛೇರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು.

ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮಿಣ ಬ್ಲಾಕ್‌ ಅಧ್ಯಕ್ಷರಾದ ನಾಗೇಶ್ ಗೌಡ, ಮಾಜಿ ಜಿಲ್ಲಾ ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ಮಹಿಳಾ ಹಾಗೂ ಯುವ ಕಾಂಗ್ರೆಸಿನ ಸದಸ್ಯರು,ಎನ್.ಎಸ್.ಯು.ಐ ಮತ್ತು ಎಲ್ಲಾ ಮುಂಚೂಣಿ ಘಟಕದವರು ಭಾಗವಹಿಸಿದರು.ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!