April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ, ಇಲ್ಲಿನ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಅವರು ಭಾಗವಹಿಸಿ 45 ವರ್ಷ ಮೇಲ್ಪಟ್ಟ ಮಹಿಳಾ ಕಲಾತ್ಮಕ ವೈಯಕ್ತಿಕ ಯೋಗಾಸನ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದು, ರಾಷ್ಟ್ರ ಮಟ್ಟದ ಕ್ರೀಡೆಗೆ ಅರ್ಹತೆ ಪಡೆದಿದ್ದಾರೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!