September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸಂಗೀತ ರವರ ಉಪಸ್ಥಿತಿಯಲ್ಲಿ ನಡೆಯಿತು.

ಡಾ.ಮಧುಮಾಲ ಕೆ ಆಳ್ವಾಸ್ ಕಾಲೇಜು ಸಮಾಜ ಕಾರ್ಯ ಮುಖ್ಯಸ್ಥರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಹಾಗೂ ಮಕ್ಕಳ ಕಾರ್ಯ ಚಟುವಟಿಕೆಯ ಬಗ್ಗೆ ಗಮನಹರಿಸಿ ಉತ್ತಮ ಸಮಾಜ ರೂಪಿಸುವಲ್ಲಿ ಮಹಿಳೆಯರಾದ ನಮ್ಮೆಲ್ಲರಿಗೂ ಜವಾಬ್ದಾರಿ ಇದೆ ಎಂದು ಉಪನ್ಯಾಸ ನೀಡಿದರು ಹಾಗೂ ಪ್ರಾದೇಶಿಕ ನಿರ್ದೇಶಕರಾದ ಗಣೇಶ್ ಬಿ ಯವರು ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಆಚರಣೆ ಹಾಗೂ ಕುಟುಂಬದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ತಿಳಿಸಿದರು ಹಾಗೂ ಕಾರ್ಯಕ್ರಮದಲ್ಲಿ ರಮೇಶ್ ಪೂಜಾರಿ, ಪಂಚಾಯತ್ ಅಧ್ಯಕ್ಷರಾದ, ಲಯನ್ ಅಧ್ಯಕ್ಷರಾದ ಹರೀಶ್ ಕುಮಾರ್ ಪೊಕ್ಕಿ, ಕುಮಾರ್ ಹೆಗ್ಡೆ, ಪ್ರಗತಿ ಬಂದು ಒಕ್ಕೂಟ ಅಧ್ಯಕ್ಷರಾದ ಸದಾನಂದ ಪೂಜಾರಿ ಹಾಗೂ ಪೂಜಾ ಸಮಿತಿ ಗೌರವ ಅಧ್ಯಕ್ಷರಾದ ಉಷಾರವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಆ. 5: ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya
error: Content is protected !!