September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ನರ್ಸರಿ ವಿಭಾಗದ ವಿದ್ಯಾರ್ಥಿಗಳು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳಿಗೆ ರಕ್ಷೆಯನ್ನು ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದರು. ವಿದ್ಯಾರ್ಥಿಗಳಿಗೆ ಹೊರ ಸಂಚಾರವು ಪಾಠದ ಒಂದು ಭಾಗವಾಗಿದ್ದು, ಸಮುದಾಯದ ಸಹಭಾಗಿತ್ವ ಎನ್ನುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಮಾತನಾಡಿ ಸಮಾಜದಲ್ಲಿ ಜವಾಬ್ದಾರಿ ಹೊಂದಿರುವ ಉತ್ತರದಾಯಿ ಸೇವೆಗಳಲ್ಲೊಂದಾದ ಆರೋಗ್ಯ ಸೇವೆಯನ್ನು ನೀಡುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ನಮ್ಮ ಸಮಾಜದ ಆರೋಗ್ಯ ರಕ್ಷಣೆಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ರಕ್ಷಾಬಂಧನದ ಈ ಶುಭದಿನದಂದು ರಕ್ಷೆಯನ್ನು ಕಟ್ಟುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಇನ್ನಷ್ಟು ಶಕ್ತಿ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.


ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಹಾಗೂ ದಂತ ವೈದ್ಯಾಧಿಕಾರಿ ಡಾ. ತುಷಾರ ಕುಮಾರಿ ಮಕ್ಕಳಿಗೆ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕಾದ ಆರೋಗ್ಯ ಸಲಹೆಗಳನ್ನು ನೀಡಿದರು. ಜೊತೆಗೆ ಅನಾರೋಗ್ಯ ಉಂಟು ಮಾಡುವ ಆಹಾರ ಪದಾರ್ಥಗಳನ್ನು ಸೇವಿಸದೆ ಪೋಷಕಾಂಶ ಭರಿತ ಆಹಾರ ಪದಾರ್ಥಗಳನ್ನು ಸೇವಿಸುವಂತೆ ಪುಟಾಣಿಗಳಿಗೆ ಕಿವಿಮಾತು ಹೇಳಿದರು. ಪುಟಾಣಿ ಮಕ್ಕಳು ಆಸ್ಪತ್ರೆಯಲ್ಲಿದ್ದ ಎಲ್ಲರಿಗೂ ರಕ್ಷೆಯನ್ನು ಕಟ್ಟುವ ಮೂಲಕ ಶುಭಾಶಯ ತಿಳಿಸಿದರು. ಭಾವನಾತ್ಮಕ ಕಾರ್ಯಕ್ರಮಕ್ಕೆ ಆಸ್ಪತ್ರೆಯಲ್ಲಿ ನೆರೆದಿದ್ದವರೆಲ್ಲ ಸಾಕ್ಷಿಯಾದರು.


ಶಾಲಾ ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ, ನರ್ಸರಿ ವಿಭಾಗದ ಶಿಕ್ಷಕಿಯರಾದ ಕಾವ್ಯ ಡಿ. ಕೆ, ಅನುಶ್ರೀ ಎಚ್, ಸಹ ಶಿಕ್ಷಕ ದಿಲೀಪ್, ಶಾಲಾ ಸಿಬ್ಬಂದಿ ಜಯರಾಮ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು, ಶುಶ್ರೂಕಿಯವರು, ಆಸ್ಪತ್ರೆಯ ಸಿಬ್ಬಂದಿಗಳು ಜೊತೆಗಿದ್ದರು.

Related posts

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya
error: Content is protected !!