22.2 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ


ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ  ಪರಿಪಕ್ವತೆಯೊಂದಿಗೆ ನಿವೃತ್ತರು ಸಮಾಜಸೇವೆಯಲ್ಲಿ ಪ್ರವೃತ್ತರಾಗಬೇಕು ಎಂದು ಉಜಿರೆಯ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು.


ಅವರು ಆ.20 ರಂದು ಉಜಿರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ಉದ್ಘಾಟಿಸಿ, ಮನವಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.


ಪ್ರತಿಯೊಬ್ಬರ ಜೀವನದಲ್ಲಿಯೂ ನಿವೃತ್ತಿ ಒಂದು ಅನಿವಾರ್ಯ ಹಂತವಾಗಿದ್ದು ನಿವೃತ್ತರು ತಾಳ್ಮೆ ,ಪ್ರೀತಿ-ವಿಶ್ವಾಸ ಹಾಗೂ ಮಾನಸಿಕ ಪರಿಪಕ್ವತೆಯೊಂದಿಗೆ ಆರೋಗ್ಯಪೂರ್ಣ ಜೀವನ ನಡೆಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ ಟಿ. ಕೃಷ್ಣಮೂರ್ತಿ ಮತ್ತು ಪ್ರೊ. ಎ. ಜಯಕುಮಾರ್ ಶೆಟ್ಟಿ ಹಾಗೂ ವೇಣೂರಿನ ಶೀಲಾ ಎಸ್. ಹೆಗ್ಡೆ ಶುಭಾಶಂಸನೆೆ ಮಾಡಿದರು.


ಅಧ್ಯಕ್ಷತೆ ವಹಿಸಿದ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲಶೆಟ್ಟಿ ಮಾತನಾಡಿ, ನಿವೃತ್ತರು ವೃದ್ಧರಲ್ಲ, ಪ್ರಬುದ್ದರು. ಕಿರಿಯರಿಗೆ ಸಕಾಲಿಕ ಮಾಹಿತಿ, ಮಾರ್ಗದರ್ಶನ ನೀಡಬೇಕು. ಪ್ರತಿಯೊಬ್ಬ ಸದಸ್ಯರೂ ಸಂಘಟನೆ ಬಗ್ಗೆ ಅಭಿಮಾನ ಮತ್ತು ಆಸಕ್ತಿಯಿಂದ ಸೇವೆ ಮಾಡಬೇಕು ಎಂದು ಹೇಳಿದರು.


ಎಲ್ಲಾ ವಿಭಾಗಸಂಘಟಕರು ಮತ್ತು ಹೊಸ ಸದಸ್ಯರನ್ನು ಗೌರವಿಸಲಾಯಿತು.
ಸನ್ಮತ್ ಕುಮಾರ್ ನಾರಾವಿ ಪ್ರಾಸ್ತ್ತಾವಿಕವಾಗಿ ಮಾತನಾಡಿದರು.
 ಬಿ ಸೋಮಶೇಖರ್ ಶೆಟ್ಟಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು. ವಸಂತ ರಾವ್ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya
error: Content is protected !!