September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಸಮಸ್ಯೆ ಇರುವ ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಅರೆವಳಿಕೆ ತಜ್ಞರ ತಂಡ ಶಸ್ತ್ರಚಿಕಿತ್ಸೆಯನ್ನು ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ಮಹಿಳೆಯರು ಕೂಡ ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿರುತ್ತಾರೆ.


ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯನ್ನು ಕೀಹೋಲ್ ಸರ್ಜರಿ ಎಂದೂ ಕರೆಯಲಾಗುತ್ತದೆ. ಟೆಲೆಸ್ಕೋಪ್ ಮತ್ತು ಸಣ್ಣ ವೀಡಿಯೋ ಕ್ಯಾಮೆರಾವನ್ನು ಹೊಂದಿರುವ ಸಣ್ಣ ಟ್ಯೂಬ್ ಮೂಲಕ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ಕಡಿಮೆ ಇರುತ್ತದೆ.


ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಮೂರು ಮಂದಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಲಭ್ಯವಿದ್ದು, ಇಲ್ಲಿ ಇದುವರೆಗೆ ಬಹಳಷ್ಟು ಮಂದಿಗೆ ಗರ್ಭಕೋಶದ ಗೆಡ್ಡೆಯ ಶಸ್ತ್ರಚಿಕಿತ್ಸೆ ಮತ್ತು ಗರ್ಭಕಂಠದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಪುದುವೆಟ್ಟು ಹಿಂದೂ ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ : ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya
error: Content is protected !!