25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

ಬೆಳಾಲು: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಶ್ರೀಮಠದ ಶಾಖೆ ಭಟ್ಕಳದ ಕರಿಕಲ್ಲಿನಲ್ಲಿ ಜರಗುತ್ತಿದೆ. ಈ ಸಂದರ್ಭದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಪೂಜ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದು ಈ ಸಂದರ್ಭದಲ್ಲಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ಮತ್ತು ಫಲತಾಂಬೂಲವನ್ನಿತ್ತು ಸ್ವಾಮೀಜಿಯವರು ಸನ್ಮಾನಿಸಿ ಗೌರವ ಸಲ್ಲಿಸಿದರು.

ಇವರು ಕಳೆದ 23 ವರ್ಷಗಳಿಂದ ಬೆಳಾಲು ಪ್ರೌಢಶಾಲೆಯಲ್ಲಿ ಸಾರ್ಥಕ ಶಿಕ್ಷಕ ಸೇವೆಯನ್ನು ಸಲ್ಲಿಸಿರುತ್ತಾರೆ ಎಂದು ಅಭಿನಂದಿಸಿ ಹರಸಿದರು. ಇವರ ಜೊತೆಗೆ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ದಯಾನಂದ ಪಿ ಬೆಳಾಲುರವರು ಉಪಸ್ಥಿತರಿದ್ದರು.

Related posts

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!