March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆಯಲ್ಲಿ ಆಡಳಿತ ವರ್ಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮತ್ತು ಮೌನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ, ಪ್ರತಿಭಟನೆಗೆ ಶಕ್ತಿ ತುಂಬಿದರು. ನಂತರ ವಿದ್ಯಾರ್ಥಿಗಳೆಲ್ಲರೂ ಎರಡು ನಿಮಿಷದ ಮೌನಚರಣೆ ಆಚರಿಸಿ ಸಂತ್ರಸ್ತೆಯ ಆತ್ಮಕ್ಕೆ ಶಾಂತಿ ಕೋರಿದರು. ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲಾ ಸರ್ಕಾರಗಳೂ ಪ್ರಥಮ ಆದ್ಯತೆ ನೀಡಬೇಕೆಂದು ಎಲ್ಲಾ ವಿದ್ಯಾರ್ಥಿಗಳ ಒಕ್ಕೊರಲಿನಿಂದ ಆಗ್ರಹಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಕೋಶಾಧಿಕಾರಿಗಳಾದ ಎಂಕೆ ಕಾಶಿನಾಥ್ ರವರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡರವರು ನೆರವೇರಿಸಿದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya
error: Content is protected !!