29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

ಬೆಳ್ತಂಗಡಿ: ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ಮಾನವತವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳು. ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ, ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು ನಮಗೆಲ್ಲಾ ಪ್ರೇರಣೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಆ. 20 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ಶ್ರೀ ಗುರುದೇವ ವಿ.ಎಸ್.ಎಸ್.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ ತುಳಿತಕ್ಕೊಳಗಾದ ಸಮಾಜಕ್ಕೆ ಸ್ವಾಭಿಮಾನದ ಶಕ್ತಿಯನ್ನು ತುಂಬಿದವರು ಬ್ರಹ್ಮಶ್ರೀ ನಾರಾಯಣಗುರುಗಳು. ಸಂಘರ್ಷವಿಲ್ಲದ ಸಂಗ್ರಾಮವನ್ನು ಸಾರಿ, ಮಾತಿಗಿಂತ ಕೃತಿ ಶಕ್ತಿಯನ್ನು ಜಗಜ್ಜಾಹಿರು ಮಾಡಿ,ಅಸ್ಪರ್ಶತೆಯನ್ನು ಹೋಗಲಾಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು. ಸಮಾಜವನ್ನು ಒಡೆಯುವ ಕೆಲಸ ಮಾಡದೇ ಸಮಾಜವನ್ನು ಕಟ್ಟುವ ಕೆಲಸವನ್ನು ಗುರುಗಳು ಮಾಡಿದರು ಎಂದರು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಮಾತನಾಡಿ ಸಮಾಜದಲ್ಲಿ ಕ್ರಾಂತಿ ಮಾಡಿದ ಮಹಾಪುರುಷ,ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರುಗಳು.ಸರಕಾರ ನಾರಾಯಣ ಗುರು ಜಯಂತಿ ಆಚರಣೆ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.

ಬೆಳ್ತಂಗಡಿ ಉಪ ತಹಿಶೀಲ್ದಾರ್ ಶ್ರೀಮತಿ ಜಯ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಹೇಮಾ ವಂದಿಸಿದರು

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Related posts

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya
error: Content is protected !!