23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು ಬೆಳ್ತಂಗಡಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿ
ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ದ.ಕ ಜಿಲ್ಲೆ ಇದರ ವತಿಯಿಂದ 36 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಆ.20 ರಂದು ತಾ.ಪಂ ಸಭಾಂಗಣದಲ್ಲಿ ಜರುಗಿತು.


ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಅವರು ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ದ.ಕ ಜಿಲ್ಲೆ ಇದರ ವತಿಯಿಂದ 36 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಿಸಿದರು. ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಜಿಲ್ಲಾ ಉಪಕಾಯ೯ದಶಿ೯ ಜಯರಾಂ, ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ಭವಾನಿ ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಡಿ..ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ ಉಪಸ್ಥಿತರಿದ್ದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್ ಸ್ವಾಗತಿಸಿದರು.

Related posts

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya
error: Content is protected !!