April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

ಲಾಯಿಲ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವವು ಆ.20ರಿಂದ ಪ್ರಾರಂಭಗೊಂಡು ಆ.22 ರವರೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಪುತ್ತೂರು ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷರಾದ ಪೀತಾಂಬರ ಹೇರಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಲಾಯಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ ಕೆ . ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಬೆಂಗಳೂರು ಉದ್ಯಮಿ ನಾರಾಯಣ ಬೇಗೂರು, ಮೋಹನ್ ದಾಸ್ ಕೊರ್ನಯ ಬೆಳ್ತಂಗಡಿ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದ ಮೋಹನ್ ದಾಸ್ ಕೊರ್ನಯ ದಂಪತಿಗಳನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿಗಳಾದ ವಸಂತ್ ಸುವರ್ಣ ಸ್ವಾಗತಿಸಿದರು. ಟ್ರಸ್ಟಿಗಳಾದ ಶ್ರೀಮತಿ ಉಮಾ ರಂಜನ್ ರಾವ್ ಧನ್ಯವಾದ ನೀಡಿದರು. ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

ಈ ವೇಳೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!