24.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಅಧ್ಯಕ್ಷರಾದ ಯತೀಶ್ ಹಾಗೂ ಸರ್ವ ಸದಸ್ಯರ ನೇತೃತ್ವದಲ್ಲಿ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿರುವ ವಿಶೇಷ ಯೋಜನೆಯಾದ ವಿದ್ಯಾನಿಧಿ ಯೋಜನೆಯನ್ನು ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.. ಈ ಯೋಜನೆಯಲ್ಲಿ ಒಂದನೇ ತರಗತಿಗೆ ದಾಖಲಾದ ಪ್ರತಿ ಮಗುವಿನ ಹೆಸರಿನಲ್ಲಿ ಎರಡು ಸಾವಿರ ರೂಪಾಯಿ ಠೇವಣಿ ಇಡುವುದರ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ.. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ ಗುಡಿಗಾರ್ ,ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಜೀವ ಗೌಡ ಮನ್ನಡ್ಕ ,ಬಂಗಾಡಿ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಲಕ್ಷ್ಮಣಗೌಡ, ಭೂ ಅಭಿವೃದ್ಧಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಾಮನಗೌಡ ,ಎಸ್‌ಡಿಎಂಸಿ ಉಪಾಧ್ಯಕ್ಷರಾದ ಹೇಮಲತಾ, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಆನಂದ ಅಡಿಲು, ಸುಧಾಕರ, ಶಾಲಾ ಮುಖ್ಯ ಶಿಕ್ಷಕಿ ದೀಪಾ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya
error: Content is protected !!