29.5 C
ಪುತ್ತೂರು, ಬೆಳ್ತಂಗಡಿ
April 4, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಸಮಸ್ಯೆ ಇರುವ ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಅರೆವಳಿಕೆ ತಜ್ಞರ ತಂಡ ಶಸ್ತ್ರಚಿಕಿತ್ಸೆಯನ್ನು ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ಮಹಿಳೆಯರು ಕೂಡ ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿರುತ್ತಾರೆ.


ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯನ್ನು ಕೀಹೋಲ್ ಸರ್ಜರಿ ಎಂದೂ ಕರೆಯಲಾಗುತ್ತದೆ. ಟೆಲೆಸ್ಕೋಪ್ ಮತ್ತು ಸಣ್ಣ ವೀಡಿಯೋ ಕ್ಯಾಮೆರಾವನ್ನು ಹೊಂದಿರುವ ಸಣ್ಣ ಟ್ಯೂಬ್ ಮೂಲಕ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ಕಡಿಮೆ ಇರುತ್ತದೆ.


ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಮೂರು ಮಂದಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಲಭ್ಯವಿದ್ದು, ಇಲ್ಲಿ ಇದುವರೆಗೆ ಬಹಳಷ್ಟು ಮಂದಿಗೆ ಗರ್ಭಕೋಶದ ಗೆಡ್ಡೆಯ ಶಸ್ತ್ರಚಿಕಿತ್ಸೆ ಮತ್ತು ಗರ್ಭಕಂಠದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!