24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು.

ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು . ಆರೋಗ್ಯ ಕಾರ್ಯಕರ್ತೆ ರೇಖಾ ಹದಿಹರೆಯಾದ ಮಕ್ಕಳ ಶಾರೀರಿಕ, ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮದ ಬಗ್ಗೆ ಹೆತ್ತವರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸಂಘದ ಅಧ್ಯಕ್ಷರಾದ ಲಿಖಿತ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀಮತಿ ದಿವ್ಯಜೋತಿ, ಶ್ರೀಮತಿ ವಿಮಲ ಆರ್ ಶೆಟ್ಟಿ, ಆಶಾ ಕಾರ್ಯಕರ್ತೆ ಶ್ರೀಮತಿ ಕವಿತಾ, ಕುಂಟಾಲಪಳಿಕೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯ ಪ್ರಭಾ. ಎಸ್, ಉಪಸ್ಥಿತರಿದ್ದರು.

ತಾಯಂದಿರು, ಕಿಶೋರಿಯರು, ಹಾಜರಿದ್ದು ಕಾರ್ಯಕ್ರಮದಲ್ಲಿ ಸುಶ್ಮಿತಾ ಸ್ವಾಗತಿಸಿ, ಸುಮ ವಂದಿಸಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಾದ ಅವನಿ, ಭೂಮಿಕಾ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Related posts

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!