24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

ಬೆಳ್ತಂಗಡಿ: ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ಮಾನವತವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳು. ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ, ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು ನಮಗೆಲ್ಲಾ ಪ್ರೇರಣೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಆ. 20 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ಶ್ರೀ ಗುರುದೇವ ವಿ.ಎಸ್.ಎಸ್.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ ತುಳಿತಕ್ಕೊಳಗಾದ ಸಮಾಜಕ್ಕೆ ಸ್ವಾಭಿಮಾನದ ಶಕ್ತಿಯನ್ನು ತುಂಬಿದವರು ಬ್ರಹ್ಮಶ್ರೀ ನಾರಾಯಣಗುರುಗಳು. ಸಂಘರ್ಷವಿಲ್ಲದ ಸಂಗ್ರಾಮವನ್ನು ಸಾರಿ, ಮಾತಿಗಿಂತ ಕೃತಿ ಶಕ್ತಿಯನ್ನು ಜಗಜ್ಜಾಹಿರು ಮಾಡಿ,ಅಸ್ಪರ್ಶತೆಯನ್ನು ಹೋಗಲಾಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು. ಸಮಾಜವನ್ನು ಒಡೆಯುವ ಕೆಲಸ ಮಾಡದೇ ಸಮಾಜವನ್ನು ಕಟ್ಟುವ ಕೆಲಸವನ್ನು ಗುರುಗಳು ಮಾಡಿದರು ಎಂದರು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಮಾತನಾಡಿ ಸಮಾಜದಲ್ಲಿ ಕ್ರಾಂತಿ ಮಾಡಿದ ಮಹಾಪುರುಷ,ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರುಗಳು.ಸರಕಾರ ನಾರಾಯಣ ಗುರು ಜಯಂತಿ ಆಚರಣೆ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.

ಬೆಳ್ತಂಗಡಿ ಉಪ ತಹಿಶೀಲ್ದಾರ್ ಶ್ರೀಮತಿ ಜಯ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಹೇಮಾ ವಂದಿಸಿದರು

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!