23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

ನಡ: ಆಟೋ ಚಾಲಕರ ಮತ್ತು ಮಾಲಕರ ಸಂಘ ಸುರ್ಯ, ಉಜಿರೆ ಇವರ ವತಿಯಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ ಆ.18 ರಂದು ಸುರ್ಯ ದೇವಸ್ಥಾನದ ವಠಾರದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಪ್ರಭಾಕರ ಮಯ್ಯ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಗೌಡ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಸ.ಪ್ರದರ್ಜೆ, ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಟಿ.ಕೆ. ಶರತ್ ಕುಮಾರ್ ಮಂಚಿಬೆಟ್ಟು ಉಜಿರೆ, ,ಸುರ್ಯ ಸ.ಕಿ.ಪ್ರಾ.ಶಾಲೆ, ಮುಖ್ಯೋಪಾಧ್ಯಾಯರು ಶ್ರೀಮತಿ ಜಯ, ಸುರ್ಯ ಸ.ಕಿ.ಪ್ರಾ.ಶಾಲೆ ಸಹಶಿಕ್ಷಕಿ ಶ್ರೀಮತಿ ಶೋಭಾ, ಸುರ್ಯ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗೀತಾ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರು ಡಾ। ಸತೀಶ್ಚಂದ್ರ ಸುರ್ಯಗುತ್ತು, ಭಾರತೀಯ ಮಜ್ದೂರು ಸಂಘ ಪ್ರಧಾನ ಕಾರ್ಯದಶಿ೯ ಜಯರಾಜ ಸಾಲಿಯಾನ್ , ಸುರ್ಯ ಬ್ಯಾಂಕ್ ಆಫ್ ಬರೋಡ ಶಾಖಾ ಪ್ರಭಂಧಕರು ಶಿವಪ್ರಸಾದ್, ನಡ ಗ್ರಾ. ಪಂ., ಅಧ್ಯಕ್ಷೆ ಶ್ರೀಮತಿ ಮಂಜುಳಾ, ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಅಧ್ಯಕ್ಷ ಕೃಷ್ಣ ಕುಮಾರ್ ಭಾಗವಹಿಸಿದ್ದರು.


ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಹಾಗೂ ಊರವರಿಗೆ ಮತ್ತು ಸಾರ್ವಜನಿಕರಿಗೆ ಕ್ರೀಡಾಕೂಟ ನಡೆದು ಬಹುಮಾನ ವಿತರಿಸಲಾಯಿತು.
ಗೌರವಾಧ್ಯಕ್ಷ ಗಣೇಶ್ ಗೌಡ, ಅಧ್ಯಕ್ಷ ರಾಜೇಶ್ ಗೌಡ, ಉಪಾಧ್ಯಕ್ಷ ಅರುಣಾಕರ ಗೌಡ, ಕಾಯ೯ದಶಿ೯ ದಿನೇಶ್ ಗೌಡ, ಜೊತೆ ಕಾರ್ಯದರ್ಶಿ ಸುಕೇಶ್ ಪೂಜಾರಿ, ಕೋಶಾಧಿಕಾರಿ ಜಗದೀಶ ಗೌಡ ಹಾಗೂ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!