September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಈ ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಅದರಲ್ಲಿಯೂ ಮುಖ್ಯವಾಗಿ ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈಧ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಸಿಯೋನ್ ಆಶ್ರಮದಲ್ಲಿ ಎಸ್‌.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!