28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ ಕಳೆದ ಮೂರು ದಶಕಗಳಿಂದ ಸೇವೆಯನ್ನು ಸಲ್ಲಿಸುತ್ತಿರುವ ಡಾ.ಶ್ರೀಧರ ಭಟ್ಟ ಇವರ ಸರ್ವಾಂಗೀಣ ಕೊಡುಗೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ಇವರಿಗೆ ವೃತ್ತಿ ಪದೋನ್ನತಿಯನ್ನು ಮಂಜೂರು ಮಾಡಿದೆ.


ಡಾ ಶ್ರೀಧರ ಭಟ್ಟ ಇವರು ಉಜಿರೆಯ ಪ್ರತಿಷ್ಠಿತ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ತದನಂತರ ಸಹ ಪ್ರಾಧ್ಯಾಪಕರಾಗಿ, ಕಾಲೇಜಿನ ವಿವಿಧ ಹಂತದ ಚಟುವಟಿಕೆಗಳಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಸಂಸ್ಥೆಯ ಏಳಿಗೆಗೆ ಶ್ರದ್ಧೆಯಿಂದ ದುಡಿದವರು. ಇವರು ಕಾಲೇಜಿನ ಪಠ್ಯ ಮತ್ತು ಪಠ್ಯೇತರ ವಿವಿಧ ಸಮಿತಿಗಳಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಜೊತೆಗೆ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ, ಸಂಸ್ಕೃತ ಪ್ರಸಾರ ಪ್ರಚಾರದಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದವರು. ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಅಧಿಕಾರಿಯಾಗಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ನ್ನು ಗುರುತಿಸಿ ಮುಖ್ಯಮಂತ್ರಿಗಳ ಪ್ರಶಂಸಾಪತ್ರ ಮತ್ತು ಡೆಪ್ಯೂಟಿ ಡೈರೆಕ್ಟರ್ ಜನರಲ್ ಕರ್ನಾಟಕ& ಗೋವಾ ವಿಭಾಗದ ಅಧಿಕಾರಿಗಳಿಂದ ವಿಶೇಷ ಪ್ರಶಂಸಾಪತ್ರ ದೊರಕಿರುತ್ತದೆ. ಅನೇಕ ಸೆಮಿನಾರುಗಳನ್ನು ಸಂಯೋಜಿಸಿ, ಹಲವು ಸೆಮಿನಾರುಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಹಲವು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಯ ಸದಸ್ಯರಾಗಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯವನ್ನು ನಿರ್ವಹಿಸಿದ್ದಾರೆ.


ಡಾ ಶ್ರೀಧರ ಭಟ್ಟ ಇವರ ಸಂಶೋಧನಾ ಲೇಖನಗಳ ಪ್ರಕಟಣೆಯನ್ನು, ಹಲವು ಪುಸ್ತಕ ಮತ್ತು ಲೇಖನಗಳ ಕೊಡುಗೆಯನ್ನು, ವಿಶೇಷವಾಗಿ ವಿದ್ಯಾರ್ಥಿಗಳಿಗೆ ನವೀನ ಮಾದರಿಯಲ್ಲಿ ಪಾಠಪ್ರವಚನಗಳನ್ನು ಮಾಡುವುದನ್ನು, ಹಾಗೆಯೇ ಸಭೆ-ಸಮಾರಂಭಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೈಗೊಂಡ ಜ್ಞಾನ ಪ್ರಸಾರ ಕಾರ್ಯಗಳೆಲ್ಲವನ್ನು ಗುರುತಿಸಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಇವರಿಗೆ ಪ್ರೊಫೆಸರ್ ಎಂಬ ವೃತ್ತಿ ಪದೋನ್ನತಿಯನ್ನು ನೀಡಿ ಅಧಿಕೃತ ಸೂಚನೆಯನ್ನು ಹೊರಡಿಸಿದೆ.

Related posts

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!