September 6, 2026
ಧಾರ್ಮಿಕ

ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರ
ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕಕ್ಕಿಂಜೆ ಚಿಬಿದ್ರೆಯಲ್ಲಿ ನಡೆಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೇರವೇರಿಸಿ ಕ್ಯಾಂಪಸ್ ಗೆ ವಾದಿ ಸಲಾಮತಿ ವಲ್ ಹುದಾ ಎಂದು ನಾಮಕರಣ ಮಾಡಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರ ನೇತೃತ್ವದಲ್ಲಿ ದಾರುಸ್ಸಲಾಂ ಸಂಸ್ಥೆಯು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತಿದ್ದು ಚಿಬಿದ್ರೆಯಲ್ಲಿ ಆರಂಭಗೊಳ್ಳುವ ಸಂಸ್ಥೆಯು ಮಹತ್ತರ‌ ಯೋಜನೆಯಲ್ಲಿ ಎಲ್ಲರೂ ಕೈಜೋಡಿಸಬೇಕು ಸಹಾಯ ಸಹಕಾರ ಮಾಡುವ ಎಲ್ಲರನ್ನೂ ದೇವರು ಅನುಗ್ರಹಿಸಲಿ ಎಂದರು
ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಬಂಬ್ರಾಣ ಅಬ್ದುಲ್ ಖಾದರ್ ಖಾಸಿಮಿ. ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ.
ದಾರುಸ್ಸಲಾಂ ಆಡಳಿತ ಸಮಿತಿಯ ಪದಾಧಿಕಾರಿಗಳು, ದುಬೈ, ಅಬುಧಾಬಿ, ಶಾರ್ಜಾ ಸಮಿತಿಯ ಪ್ರತಿನಿಧಿಗಳು, ಸ್ವಾಗತ ಸಮಿತಿಯ ನೇತಾರರು ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya
error: Content is protected !!