25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ “ಆನ್ವೀಕ್ಷ್ಯಂ-2024” ಎಂಬ ಶೀರ್ಷಿಕೆಯಡಿಯಲ್ಲಿ ಆ.21 ರಂದು ನಡೆಯಿತು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್ ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದ ಸ್ಪರ್ಧಾರ್ಥಿಗಳಿಗೆ ಶುಭಹಾರೈಸಿದರು.

ಶಾಲೆಯ ಹಿರಿಯ ವಿದ್ಯಾರ್ಥಿನಿ ಡಾ.ಅಖಿಲ ಭಂಡಾರ್ಕರ್.ಪಿ (ಎಮ್.ಬಿ.ಬಿ.ಎಸ್, ಎಮ್.ಡಿ ಜೆನೆರಲ್ ಮೆಡಿಸಿನ್, ಡಿ.ಎಮ್ ಎಂಡೋಕ್ರಿನೋಲಜಿ) ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಸ್ಪರ್ಧೆಯಲ್ಲಿ ಜಿಲ್ಲೆಯ ಒಟ್ಟು 33 ಸಿ.ಬಿ.ಎಸ್.ಇ ಶಾಲಾ ತಂಡಗಳು ಭಾಗವಹಿಸಿದ್ದವು.

Related posts

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!