September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಇದರ ವಾರ್ಷಿಕ ಮಹಾಸಭೆಯ ಸುಳ್ಯದ ಅಮೃತ ಸಭಾಭವನದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಗೆ ಬೆಳ್ತಂಗಡಿಯ ವಲಯದ ಐದು ಸದಸ್ಯರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಧನರಾಜ್ ಶೆಟ್ಟಿ ಆಯ್ಕೆಯಾದರು.

ಈ ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಎಂ ಆಯ್ಕೆಯಾದರು. ಉಪ ಕಾರ್ಯದರ್ಶಿ ಯಾಗಿ ಬೆನಕ ಸೌಂಡ್ಸ್ ನ ಮಾಲಕರಾದ ವಸಂತ ನಾವೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯಾಗಿ ಸಂಜೀವ ಬಿ.ಎಚ್ ಸಂಜಯ ಸೌಂಡ್ಸ್, ನಾರಾಯಣ ಗೌಡ ನಿಶ್ಮಿತಾ ಸೌಂಡ್ಸ್, ಜಿಲ್ಲಾ ಗೌರವ ಸಲಹೆಗಾರರಾಗಿ ತಾಲ್ಲೂಕಿನ ಉಪಾಧ್ಯಕ್ಷರಾದ ಜೋಸೆಫ್ ಕೆ.ಡಿ ಆಯ್ಕೆಯಾದರು.

ಮಹಾಸಭೆಯಲ್ಲಿ ಆಯ್ಕೆಯಾದ ಬಳಿಕ ನೂತನ ಸದಸ್ಯರಿಗೆ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಅಭಿನಂದನೆ ಸಲ್ಲಿಸಿದರು.

Related posts

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya
error: Content is protected !!