27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್ ನ ಸಹಭಾಗಿತ್ವದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮವು ಆ 21 ರಂದು ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ ಪ್ರಾಂಶುಪಾಲರು ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಇವರು ವಹಿಸಿದರು .ಮುಖ್ಯ ಅತಿಥಿಗಳಾಗಿ ಡಾ. ವಿನಯ ಕಿಶೋರ್ ಸ್ತ್ರೀ ರೋಗ ತಜ್ಞರು ಬೆನಕ ಹೆಲ್ತ್ ಸೆಂಟರ್ ಉಜಿರೆ ಇವರು ವಹಿಸಿ ವಿದ್ಯಾರ್ಥಿಗಳಿಗೆ ಹದಿ ಹರೆಯದ ಸಮಸ್ಯೆ ಆರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಆನ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಶ್ರೀಧರ್ ಹಾಗೂ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಉಪಸ್ಥಿತರಿದ್ದರು ಹಾಗೂ ಪಾಲಿಟೆಕ್ನಿಕ್ ಕಾಲೇಜುನ ಎಲ್ಲಾ ಮಹಿಳಾ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Related posts

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya
error: Content is protected !!