ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ 26 ಪುಟಗಳ ವರದಿ ನೀಡಿದ್ದು. ಕಾಮಗಾರಿ ನಿರ್ವಹಣೆಯಲ್ಲಿ ಕತ೯ವ್ಯ ಲೋಪವಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 15 ನೇ ಹಣಕಾಸಿನ ಯೋಜನೆಯ 2021-22 ರಲ್ಲಿ ನಡೆದ ವಿವಿಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಬಂಗಾಡಿ ನಿವಾಸಿ ಜಯರಾಮ.ಕೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು ಈ ಸಂಬಂಧ ಬೆಂಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಇದೀಗ ಕ್ರಮ ಕೈಗೊಳ್ಳಲು ವರದಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು ಗ್ರಾಮ ಪಂಚಾಯತ್ ನಲ್ಲಿ 13 ಕಾಮಗಾರಿಯಲ್ಲಿ ಲೋಪವಾಗಿರುವುದು ತನಿಖೆಯಲ್ಲಿ ಪತ್ತೆ ಹಚ್ಚಿದ್ದಾರೆ. ಅದಲ್ಲದೆ ಲೋಕಾಯುಕ್ತ ಪೊಲೀಸರು ವರದಿಯಲ್ಲಿ 7 ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಜು.9,10 ರಂದು ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಹಿರಿಯ ಉಪ ನಿರ್ದೇಶಕರು ತಾಂತ್ರಿಕ ವಿಭಾಗದ ಇಂಜಿನಿಯರ್ ಪ್ರಕಾಶ್ ಬಣಕಾರ್ ಮತ್ತು ಸಹಾಯಕ ಇಂಜಿನಿಯರ್ ತೇಜಶ್ರೀ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳ ನೇತೃತ್ವದ ತಂಡ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಆಗಮಿಸಿ ತನಿಖೆ ಮಾಡಿ ಹೋಗಿದ್ದರು.

ಬೆಂಗಳೂರು ಲೋಕಾಯುಕ್ತ ತಾಂತ್ರಿಕ ವಿಭಾಗದ ಲೆಕ್ಕ ಪರಿಶೋಧನ ಅಧಿಕಾರಿ ಹಾಗೂ ತನಿಖಾಧಿಕಾರಿ ಬಣಕಾರ್ ಪ್ರಕಾಶ್ ಕುಮಾರ್ ಮತ್ತು ತಾಂತ್ರಿಕ ವಿಭಾಗದ ಸಹಾಯಕ ಇಂಜಿಯರ್ ತೇಜ.ಶ್ರಿ.ಮದ್ದೋಡಿ ಅವರು ತನಿಖೆ ನಡೆಸಿದ ವರದಿಯಲ್ಲಿ. ಬೆಳ್ತಂಗಡಿ ಪಂಚಾಯತ್ ರಾಜ್ ಸಹಾಯಕ ಇಂಜಿನಿಯರ್ ಹರ್ಷಿತ್ .ಪಿಡಿಓ ಸವಿತಾ, ಇಂದಬೆಟ್ಟು ಗ್ರಾ.ಪಂ ಅಧ್ಯಕ್ಷ ಅನಂದ.ಎ, ನಿವೃತ್ತ ಪಂಚಾಯತ್ ರಾಜ್ ಕಿರಿಯ ಇಂಜಿನಿಯರ್ ಮೊಹಮ್ಮದ್ ಪಿ ಇವರು ನಾಲ್ಕು ಜನ ಕರ್ತವ್ಯ ಲೋಪ ಎಸಗಿರುವುದಾಗಿ ಲೋಕಾಯುಕ್ತ ಹಿರಿಯ ಅಧಿಕಾರಿಗಳಿಗೆ ನಾಲ್ಕು ಜನರ ವಿರುದ್ಧ ಕ್ರಮ ಕೈಗೊಳ್ಳಲು ಆ.5 ರಂದು ವರದಿ ಸಲ್ಲಿಸಿದ್ದಾರೆ.

Leave a Comment

error: Content is protected !!