ನಡ : ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಗಳಡಿಯಲ್ಲಿ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಇವರ ವತಿಯಿಂದ ನಡ ಸರಕಾರಿ ಪ್ರೌಢಶಾಲೆಯಲ್ಲಿ ಮಾಹಿತಿ ಶಿಕ್ಷಣ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಮೂಲ್ಯ ಸಂಪತ್ತಾದ ನೀರಿನ ಮಹತ್ವ, ನೀರಿನ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛ ಗ್ರಾಮ ನಿರ್ಮಾಣದಲ್ಲಿ ನಮ್ಮ ಪಾತ್ರ, ಮೊಬೈಲ್ ಬಳಕೆಯ ದುಷ್ಪರಿಣಾಮಗಳು ವಿಚಾರವಾಗಿ ವಿದ್ಯಾರ್ಥಿಗಳಿಗೆ ಚಿತ್ರ ಪ್ರದರ್ಶನ ಮತ್ತು ಮಾಹಿತಿ ನೀಡಲಾಯಿತು.
ಜಿಲ್ಲಾ ಸಂಯೋಜಕ ಶಿವರಾಮ್ ನೀರಿನ ಸದ್ಭಳಕೆ, ಸ್ವಚ್ಛ ಪರಿಸರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಮತ್ತು ಸಮುದಾಯದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ “ನೀರು ನೈರ್ಮಲ್ಯ ಹೊಂದಿರುವ ಆದರ್ಶ ಗ್ರಾಮ” ಮತ್ತು “ಕಲುಷಿತ ನೀರಿನ ದುಷ್ಪರಿಣಾಮಗಳು ಮತ್ತು ಅತಿಸಾರ ತಡೆಗಟ್ಟುವಿಕೆ” ವಿಷಯಗಳ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಸಾನ್ವಿ, ರಝ್ಮಿನಾ ಫಾತಿಮಾ,ರೇಣುಕಾ, ಧನ್ಯಶ್ರೀ, ಭಾಗ್ಯಶ್ರೀ ಈ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.
ಮುಖ್ಯ ಶಿಕ್ಷಕರಾದ ಮೋಹನಬಾಬು ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.