April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್.ಗುರುವಾಯನಕೆರೆ‌ ವ್ಯಾಪ್ತಿಯ ಹೊಸಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಯಾದ ರಾಜ್ಯ ಪ್ರಶಸ್ತಿ ಪಡೆದ ಸೋಮಶೇಖರ್ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರುವಂತೆ ಮಾರ್ಗದರ್ಶನ ನೀಡಿದರು ಹಾಗೂ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಮುಕುಂದ ಚಂದ್ರ .ಎಲ್ ಎಮ್.ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಜನ ಜಾಗೃತಿ ಸದಸ್ಯರಾದ ವಿದ್ಯಾನಂದ ಜೈನ್ ಹಾಗೂ ತಾಲೂಕು ಜನ ಜಾಗೃತಿ ಸದಸ್ಯರಾದ ವಿಠ್ಠಲ ಸಿ ಪೂಜಾರಿ ಹಾಗೂ ಹೊಸಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಧರ್ ನಿರೂಪಿಸಿ ಸೇವಾ ಪ್ರತಿನಿಧಿ ಶ್ರೀಮತಿ ಮಮತಾ ಸ್ವಾಗತಿಸಿ, ಶಿಕ್ಷಕರಾದ ಹರಿಪ್ರಸಾದ್ ವಂದನಾರ್ಪಣೆ ಮಾಡಿದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya
error: Content is protected !!