27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ.

ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ ಕಾಲ ನ್ಯಾಯಾಲಯದಲ್ಲಿತ್ತು. ನೂತನ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಜಾಗವೆಂದು ಹೇಳಿ ಕಟ್ಟಡ ನಿರ್ಮಾಣ ಸಂದರ್ಭ ಯಮುನಾ ನಿವಾಸ ಎಂದು ಬೋರ್ಡ್ ಅಳವಡಿಸಿದ್ದರು. ಡಿ.ಸಿ. ಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಎಂದು ತೀರ್ಪು ಬಂದಿದ್ದು, ತಕರಾರು ಇತ್ಯರ್ಥಗೊಂಡಿದೆ. ಉಪ್ಪಿನಂಗಡಿ ಠಾಣಾ ಪೊಲೀಸರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದ್ರಿ ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಟ್ಟಡ ಕಾಮಗಾರಿ ಮುಂದುವರಿಯಲಿದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya
error: Content is protected !!