ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ)ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು, ಜನ ಜಾಗೃತಿ ಗ್ರಾಮ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವೇಣೂರು ವಲಯ ಮತ್ತು ಲಯನ್ಸ್ ಕ್ಲಬ್ ವೇಣೂರು ಹಾಗೂ ಸರಕಾರಿ ಪ್ರೌಢ ಶಾಲೆ ವೇಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಶಿಕ್ಷಕರಾದ ಸುಕನ್ಯಾ ಪ್ರಭು ವಹಿಸಿದ್ದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರು ಹರೀಶ್ ಕುಮಾರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಎಸ್ ಡಿ ಎಂ ಕಾಲೇಜಿನ ನಿವೃತ್ತ ಶಿಕ್ಷಕರಾದ ಸೋಮಶೇಖರ್ ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳು ಹದಿಹರೆಯ ವಯಸ್ಸಿನ ದಾರಿ ತಪ್ಪುವ ಸಮಯ ಆ ದಿನಗಳಲ್ಲಿ ಮಾದಕ ವ್ಯಸನಗಳಿಗೆ ಬಲಿಯಾಗದೆ ಒಳ್ಳೆಯ ಹವ್ಯಾಸಗಳನ್ನು ರೂಡಿಸಿಕೊಂಡು ಉತ್ತಮ ನಾಗರಿಕರಾಗಬೇಕೆಂಬ ಸಂದೇಶ ನೀಡಿದರು.

ವಿದ್ಯಾರ್ಥಿಗಳು ಮುಂದಿನ ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಕ್ಕೇ ಬಲಿಯಾಗದೆ ಉತ್ತಮ ಜೀವನವನ್ನು ನಡೆಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಮೋಹನ್ ಅಂಡಿಜೆ ಮನೆಯನ್ನು ಬೀಡಿಯಿಂದ ಬೆಳಗಬಾರದು ಬದಲಾಗಿ ಮನೆಯನ್ನು ದೀಪದಿಂದ ಬೆಳಗಬೇಕೆಂದು ಹಿತವಚನ ವನ್ನು ನುಡಿದರು.


ಲಯನ್ಸ್ ಕ್ಲಬ್ ನ ಅಧ್ಯಕ್ಷ ಹರೀಶ್ ಕುಮಾರ್ ಮಕ್ಕಳು ತಂದೆ ತಾಯಿ ಹಾಗೂ ಗುರುಗಳ ಮಾತನ್ನು ಪಾಲಿಸಬೇಕು ಹಾಗೆಯೇ ಉನ್ನತ ಗುಣಮಟ್ಟದ ಶಿಕ್ಷಣವನ್ನು ಪಡೆದು ಭಾರತದ ಪ್ರಜೆಯಾಗಿ ಬಾಳಿ ಬದುಕಿ ಊರಿಗೆ ಮತ್ತು ದೇಶಕ್ಕೆ ಒಳ್ಳೆ ಹೆಸರನ್ನು ತಂದು ಕೊಡಬೇಕು ಎಂದು ಹೇಳಿದರು. ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕರು ರವೀಂದ್ರ ಸರ್ ಇವರು ನಿರೂಪಣೆಯನ್ನು ಮಾಡಿದರು ಹಾಗೆಯೇ ಸ್ವಾಗತವನ್ನೂ ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಮಾಡಿದರು. ಶಾಲೆಯ ಶಿಕ್ಷಕಿಯಾದ ಸಂಧ್ಯಾ ಜೈನ್ ವಂದಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿಯಾದ ಗಿರೀಶ್ ಕೆ ಎಸ್ ಹಾಗೂ ಮಾಜಿ ಪಂಚಾಯತ್ ಸದಸ್ಯರಾದ ರಾಜೇಶ್ ಮೂಡುಕೋಡಿ ಹಾಗೂ ಲಯನ್ಸ್ ಕ್ಲಬ್ ನ ಕಾರ್ಯದರ್ಶಿಗಳಾದ ಜಯರಾಮ್ ಹೆಗ್ಡೆ ಹಾಗೂ ಪ್ರಗತಿ ಬಂಧು ಒಕ್ಕೂಟದ ವಲಯ ಅಧ್ಯಕ್ಷರಾದ ಗಿರೀಶ್ ಬಜಿರೆ ಹಾಗೂ ಸುಧೀರ್, ಸೇವಾಪ್ರತಿನಿಧಿಗಳಾದ ಶ್ರೀಮತಿ ಜಯಂತಿ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Leave a Comment

error: Content is protected !!