ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ, ಉಜಿರೆ ಹಿರಿಯ ವಿದ್ಯಾರ್ಥಿಗಳ ಸಂಘ ಇದರ ವತಿಯಿಂದ ಎಸ್.ಡಿ. ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ – 2024 ಕಾರ್ಯಕ್ರಮವು ಆ.24 ರಂದು ಇಂದ್ರಪ್ರಸ್ತ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ವಹಿಸಿದರು. ಕಾರ್ಯಕ್ರಮವನ್ನು ಬೆಂಗಳೂರು ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಜಿರೆ ಶ್ರೀ ಧ.ಮಂ. ಕಾಲೇಜು ಪ್ರಾಂಶುಪಾಲರು ಡಾ. ಬಿ. ಎ. ಕುಮಾರ ಹೆಗ್ಡೆ , ಕಾರ್ಯಕ್ರಮ ಸಂಯೋಜಕರಾದ ಡಾ. ಎಂ.ಪಿ ಶ್ರೀ ನಾಥ್ , ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗುರುನಂದ ಪ್ರಭು, ಉಪಸ್ಥಿತರಿದ್ದರು.

ಈ ವೇಳೆ ಹಿರಿಯ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ರೂ.5 ಲಕ್ಷದ ಚೆಕ್ ಹಸ್ತಾಂತರಿಸಲಾಯಿತು. ವಿಶೇಷ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳಾದ ಸುಶಾಂತ್ ಶೆಟ್ಟಿ, ಸಿರಿ ಶರ್ಮ ರವರನ್ನು ಸನ್ಮಾನಿಸಲಾಯಿತು.

ನಂತರ ಕಲಾಮಯಂ ಉಡುಪಿ ಇವರಿಂದ ‘ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳು ಮತ್ತು ಹಾಲಿ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಎಸ್.ಡಿ.ಎಂ. ಕಾಲೇಜಿನ ವೈದೇಹಿ ಮತ್ತು ಬಳಗ ಪ್ರಾರ್ಥಿಸಿ, ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಬಿ.ಕೆ. ಧನಂಜಯ್ ರಾವ್ ಸ್ವಾಗತಿಸಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಯೋಜಕ ಎಂ.ಪಿ ಶ್ರೀನಾಥ್ ಧನ್ಯವಾದವಿತ್ತರು. ಡಾ. ದಿವಾಕರ ಕೆ. ಮತ್ತು ಶ್ರೀಮತಿ ದಿವ್ಯ ಕುಮಾರಿ ನಿರೂಪಿಸಿದರು.

Leave a Comment

error: Content is protected !!