38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ನಿವಾಸಿಯಾದ, ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ (83) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವಾಗಿ ಎಸ್.ಪಿ ಯವರು ಮಾಹಿತಿ ನೀಡಿದ್ದಾರೆ.

ಸದ್ರಿ ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಆರೋಪಿಗಳು ಸದರಿ ಕೃತ್ಯವನ್ನು ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿರುತ್ತದೆ. ಆರೋಪಿಗಳ ಪೈಕಿ ಓರ್ವನು ಅಪರಾಧಿತ ಹಿನ್ನೆಲೆ ಹೊಂದಿದ್ದು, ಆತನ ವಿರುದ್ಧ ಕೇರಳ ರಾಜ್ಯದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವು ದಾಖಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುವ ಬಗ್ಗೆಯೂ ತಿಳಿದುಬಂದಿರುತ್ತದೆ ಎಂದು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!