April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲ ಬಾಲಕ /ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟ ಆ. 24 ರಂದು ಸಂತ ತೆರೇಸಾ ಪ್ರೌಢಶಾಲೆಯ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಚಾಲನೆ ನೀಡಲಾಯಿತು.

ಶಾಲಾ ವಿದ್ಯಾರ್ಥಿ ತಂಡ ಪ್ರಾರ್ಥನಾ ಗೀತೆಯೊಂದಿಗೆ ದೈವಾನುಗ್ರಹವನ್ನು ಬೇಡಿದರು. ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗಿಸಿ ಉದ್ಘಾಟನೆಗೈದರು. ನಮ್ಮ ಶಾಲಾ ಮುಖ್ಯಶಿಕ್ಷಕಿ ವಂ.ಭಗಿನಿ ಲೀನಾ ಡಿಸೋಜರವರು ಸರ್ವರನ್ನು ಪ್ರೀತಿಯಿಂದ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿಯವರು- ಸೋಲು ಗೆಲುವು ಮುಖ್ಯವಲ್ಲ ಕ್ರೀಡಾ ಸ್ಪೂರ್ತಿ ಮುಖ್ಯ ಎಂದು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯವರಾದ ಶ್ರೀಮತಿ ಸುಜಯರವರು ಕ್ರೀಡಾ ನಿಯಮಗಳನ್ನು ತಿಳಿಸಿ ಸರ್ವರಿಗೆ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಶಾಲಾ ಸಂಚಾಲಕರಾದ ವಂ.ಭಗಿನಿ ತೆರೇಸಿಯಾ ಸೇರಾರವರು ಮಾತನಾಡಿ ಅವಕಾಶಗಳ ಬಾಗಿಲು ತೆರೆದಿದೆ. ಪ್ರತಿಯೋರ್ವರು ಅದನ್ನು ಬಳಸಬೇಕೆಂದರು. ಶಾಲಾ ಕನ್ನಡ ಶಿಕ್ಷಕಿ ಶ್ರೀಮತಿ ಉಮ್ಮಕ್ಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

ವಿಜ್ಞಾನ ಶಿಕ್ಷಕಿ ಶ್ರೀಮತಿ ನಿಶಾರವರು ವಂದನಾರ್ಪಣೆ ಗೈದರು. ತಾಲೂಕಿನ ವಿವಿಧ ಶಾಲೆಯ 10 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದು. ಬಾಲಕರ ವಿಭಾಗದಲ್ಲಿ ಎಸ್.ಡಿ.ಎಂ ಉಜಿರೆ – ಪ್ರಥಮ, ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ – ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢಶಾಲೆ -ಪ್ರಥಮ , ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ – ದ್ವಿತೀಯ ಸ್ಥಾನ ಪಡೆದುಕೊಂಡಿದೆ.

Related posts

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!