April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮಡಂತ್ಯಾರು ವಲಯ ಮಚ್ಚಿನ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್ ನಾಯ್ಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕಾರ್ಯಕ್ರಮ ಉದ್ಘಾಟಿಸಿ ವಿಶ್ವ ಸಂಸ್ಥೆ ಗುರುತಿಸಿದ ಆರು ಮಾರಕ ಕಾಯಿಲೆಗಳಲ್ಲಿ ಮಾದಕ ಚಟವು ಕೂಡ ಒಂದು. ಯಾವುದೇ ಚಟಗಳು ಮಿತಿ ಮೀರಿದಾಗ ಅದಕ್ಕೆ ಮನಸ್ಸು ಹೊಂದಿಕೊಳ್ಳುತ್ತದೆ .ಇಡೀ ಪ್ರಪಂಚದಲ್ಲಿ ಒಂದನೆಯ ಸೈಲೆಂಟ್ ಕಿಲ್ಲರ್ ಧೂಮಪಾನ ,ಎರಡನೆಯದ್ದು ಮದ್ಯಪಾನ ಹಾಗಾಗಿ ವಿದ್ಯಾರ್ಥಿಗಳು ಇಂಥಹ ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಕಲಿಕೆಯ ಜೊತೆಗೆ ಜೀವನದ ಪಾಠದಲ್ಲಿ ಕೂಡ ಉತ್ತೀರ್ಣರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜನಜಾಗೃತಿ ತಾಲ್ಲೂಕಿನ ಸಮಿತಿ ಸದಸ್ಯರಾದ ಗೋಪಾಲ್ ಕೊಲಾಜೆ, ವಲಯ ಅಧ್ಯಕ್ಷ ಜಯ ಪೂಜಾರಿ, ಮಚ್ಚಿನ ಸತ್ಯ ನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಸೇವಾಪ್ರತಿನಿಧಿ ಪರಮೇಶ್ವರ್, ಕುದ್ರಡ್ಕ ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya
error: Content is protected !!