24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

ಬೆಳ್ತಂಗಡಿ: ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಕೆಲವೊಂದು ಪಡಿತರ ಚೀಟಿ ಸದಸ್ಯರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಪ್ರಸ್ತುತ ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲೂ ಕೂಡಾ ಅವಕಾಶ ಕಲ್ಪಿಸಿರುತ್ತದೆ. ಜೀವಮಾಪನ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಸದಸ್ಯರು ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡುವುದು. ಸರಕಾರವು ಆ.31 ರವರೆಗೆ ಅವಕಾಶ ಕಲ್ಪಿಸಿದ್ದು ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗಳಿಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಜೀವಮಾಪನ ನೀಡಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿ ಇ-ಕೆವೈಸಿಯನ್ನು ಮಾಡುವಂತೆ ತಿಳಿಸಿದೆ. ಇದು ಪಡಿತರ ಚೀಟಿದಾರರಿಗೆ ಕೊನೆಯದಾಗಿ ತಿಳುವಳಿಕೆ ನೀಡುವುದಾಗಿದ್ದು ಆ.31 ರ ನಂತರ ಇ-ಕೆವೈಸಿ ಬಾಕಿಯಾಗಿರುವ ಪಡಿತರ ಚೀಟಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವಾಸ್ತವ್ಯಕ್ಕೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿ ಕೊಳ್ಳಬೇಕು.

ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿ ಕೊಳ್ಳಲು ಅವಕಾಶವಿದೆ. ಪಡಿತರಚೀಟಿದಾರರ ಎಲ್ಲಾ ಸದಸ್ಯರ ಬಯೋದೃಢೀಕರಣ ಮಾಡಿಸಬೇಕು. ವಿಶೇಷ ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಆ ಬಗ್ಗೆ ದೃಢಪತ್ರ,ಆಧಾರ್ ಸಂಖ್ಯೆ, ಫೋನ್ ನಂಬರ್, ಅಡುಗೆ ಅನಿಲದ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಂಬಂಧವನ್ನು ಸಹ ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಜಿಲ್ಲೆಯ ಹಾಗೂ ಪರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿ ಕೊಳ್ಳದ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ರದ್ದಾಗಬಹುದು. ಪಡಿತರ ಚೀಟಿಗಳಲ್ಲಿ ಭಾಗಶ: ಜೀವಮಾನ ನೀಡಲ್ಪಟ್ಟು ಬಾಕಿ ಉಳಿದಿರುವ ಸದಸ್ಯರು ಕೂಡಾ ಈ ತಿಂಗಳ ಅಂತ್ಯದವರೆಗೆ ಕಾಯದೇ ಕೂಡಲೇ ಇ-ಕೆವೈಸಿ ಮಾಡಿಸಿ ಕೊಂಡು ಪಡಿತರ ಚೀಟಿಯನ್ನು ಊರ್ಜಿತವಾಗಿರಿಸಿಕೊಳ್ಳಬಹುದಾಗಿರುತ್ತದೆ

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!