25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ:ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ – ಶೇ 20 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಇವರ ಅಧ್ಯಕ್ಷತೆಯಲ್ಲಿ ಆ.25ರಂದು ಸುವರ್ಣ ಆಕೇ೯ಡ್ ಸಭಾಂಗಣದಲ್ಲಿ ನಡೆಯಿತು.
2023-24ನೇ ಸಾಲಿನ ವಾರ್ಷಿಕ ವರದಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಲಾಯಿತು.

ಕಳೆದ ಸಾಲಿನಲ್ಲಿಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿಶೇಷ ಪ್ರೋತ್ಸಾಹಕ ನಿಧಿಯೊಂದಿಗೆ ಅಭಿನಂದಿಸಲಾಯಿತು. ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿಸಿದ ಸಾಲಗಾರರನ್ನು ಗುರುತಿಸಿ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿದ ಡಾ. ಕೆ. ಜಯಕೀರ್ತಿ ಜೈನ್ ಕಳೆದ 15 ವರ್ಷಗಳಲ್ಲಿ ಸಹಕಾರಿ ಸಂಘವು ಬೆಳೆದು ಬಂದ ದಾರಿಯನ್ನು ಸಭೆಗೆ ತಿಳಿಸಿದರು. ಉಪಾಧ್ಯಕ್ಷರಾದ ಚಿದಾನಂದ ಹೂಗಾ‌ರ್ ಸ್ವಾಗತಿಸಿ, ನಿರ್ದೇಶಕರಾದ ಕೆ ಚಂದ್ರಶೇಖರ ರವರು ಧನ್ಯವಾದವಿತ್ತರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸನ್ಮಾನ ಕಾರ್ಯಕ್ರಮವನ್ನು ಧರಣೇಂದ್ರ ಕೆ ಜೈನ್ ನಿರ್ವಹಿಸಿದರು.

ನಿರ್ದೇಶಕರಾದ ಕೆ ಚಂದ್ರಶೇಖರ, ಅಬ್ದುಲ್ ರಝಾಕ್, ಆರತಿ ಜೈನ್, ಪ್ರಶಾಂತ್ ಕುಮಾರ್, ಹೇಮಲತಾ, ವಾರಿಜ ಕೆ. ಜಯರಾಜ್ ಜೈನ್, ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಕೊಕ್ಕಡ ಶಾಖಾಧಿಕಾರಿ ಪಿ ಅತಿಶಯ್ ಜೈನ್, ಸಿಬ್ಬಂದಿ ವಿಶಾಲ ಹಾಗೂ ಎಲ್ಲಾ ಪಿಗ್ಮಿ ಸಂಗ್ರಾಹಕರು ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!