ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆ 24 ರಂದು ಆಯೋಜಿಸಲಾಗಿತ್ತು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಪ್ರಾಂಶುಪಾಲರು ಸಂತೋಷ ವಹಿಸಿದ್ದರು. ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಕಾರ್ಯನಿರ್ವಹಣಾಧಿಕಾರಿ ಜನಾರ್ಧನ ಹಾಗೂ ಬ್ಲಡ್ ಬ್ಯಾಂಕ್ ಮಂಗಳೂರು ರಕ್ತನಿಧಿ ಸಂಚಾಲಕರು ಪ್ರವೀಣ್ ಮತ್ತು ಕ್ಷಿತಿ ಕಂಠ ಭಟ್ ರಕ್ತ ಪ್ರಯೋಗಾಲಯದ ಅಧಿಕಾರಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಹಾಗೂ ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿಗಳಾದ ಪ್ರಕಾಶ್ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ರಕ್ತದಾನ ಶಿಬಿರದಲ್ಲಿ ಒಟ್ಟು 102 ಯೂನಿಟ್ ರಕ್ತ ಸಂಗ್ರಹಿಸಲಾಯಿತು.