September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಆಗಸ್ಟ್ 28 ರಂದು ಬುಧವಾರ ಅಂಬೇಡ್ಕರ್ ಸಭಾಂಗಣದಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.

ಎಸ್.ಡಿ.ಪಿ.ಐ ಪಕ್ಷದ ಆಂತರಿಕ ಚುನಾವಣೆಯು ದೇಶದೆಲ್ಲೆಡೆ ನಡೆಯುತ್ತಿದ್ದು ಇದರ ಭಾಗವಾಗಿ ಕ್ಷೇತ್ರ ಸಮಿತಿಯ ಪ್ರತಿನಿಧಿ ಸಭೆ ಬೆಳ್ತಂಗಡಿ ಅಂಬೇಡ್ಕರ್ ಭವನ ದಲ್ಲಿ ಆಯೋಜಿಸಲಾಗಿದೆ. ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಈ ಸಭೆಯಲ್ಲಿ ಕ್ಷೇತ್ರ ಸಮಿತಿಯ 2024 – 2027 ರ ಅವಧಿಗೆ ಹೊಸ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಕ್ಷೇತ್ರ ಪ್ರತಿನಿಧಿ ಸಭೆಗೆ ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಬೆಳ್ತಂಗಡಿ ಕ್ಷೇತ್ರ ಉಸ್ತುವಾರಿಯೂ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಜಿಲ್ಲಾ ಕಾರ್ಯದರ್ಶಿಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಯೂಸುಫ್ ಆಲಡ್ಕ, ಕ್ಷೇತ್ರ ಸಮಿತಿಯ ಉಪಾಧ್ಯಕ್ಷರುಗಳಾದ ಹನೀಫ್ ಪುಂಜಾಲಕಟ್ಟೆ, ಇನಾಸ್ ರೋಡ್ರಿಗಸ್, ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯ ಅಧ್ಯಕ್ಷೆ ಶಮಾ ಅಲಿ, ಹಾಗೂ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು , ಅತಿಥಿಗಳಾಗಿ ಆಗಮಿಸಲಿದ್ದಾರೆ . ಕ್ಷೇತ್ರ ವ್ಯಾಪ್ತಿಯ SDPI ಪಕ್ಷದ ಚುನಾಯಿತ ಜನಪ್ರತಿನಿಧಿಗಳು, ಬ್ಲಾಕ್ ಸಮಿತಿಯ ನಾಯಕರುಗಳು, ವಿಶೇಷ ಆಹ್ವಾನಿತರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎಸ್.ಡಿ.ಪಿ.ಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya
error: Content is protected !!