April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆದು ಏಮ್ಸ್ ( ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ) ಸೇರುವ ಕಾತರದಲ್ಲಿ ಭಾರತದ ಲಕ್ಷಾಂತರ ವಿದ್ಯಾರ್ಥಿಗಳು ಇರುವ ಸಂದರ್ಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತೆ ಸಾಧನೆ ಮೆರೆದಿದ್ದಾರೆ. 720 ಅಂಕಗಳ ನೀಟ್ ಪರೀಕ್ಷೆಯಲ್ಲಿ 710 ಅಂಕಗಳನ್ನು ಪಡೆದು, ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಪ್ರಜ್ವಲ್ ಎಚ್. ಎಂ ಗೆ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾದ ಒಡಿಶಾದ ಭುವನೇಶ್ವರ ಏಮ್ಸ್ ನಲ್ಲಿ ಮೊದಲ ಸುತ್ತಿನಲ್ಲೇ ಪ್ರವೇಶಾತಿಗೆ ಅವಕಾಶ ದೊರಕಿದೆ.


ಈ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಕೂಡಾ ಹಲವು ವಿದ್ಯಾರ್ಥಿಗಳನ್ನು ಏಮ್ಸ್, ಐ ಐ ಟಿ, ಎನ್ ಐ ಐ ಟಿ ಹಾಗೂ ರಾಷ್ಟ್ರದ ಪ್ರಮುಖ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಮತ್ತು ಉನ್ನತ ವೈಜ್ಞಾನಿಕ ಸಂಸ್ಥೆಗಳಲ್ಲಿ ವ್ಯಾಸಂಗ ನಡೆಸುವಂತೆ ತರಬೇತಿ ನೀಡಿದ್ದ ಎಕ್ಸೆಲ್ ನಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ದೇಶದ ಉನ್ನತ ಸಂಸ್ಥೆಗಳಲ್ಲಿ ಅವಕಾಶ ಪಡೆಯಲಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya
error: Content is protected !!