30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

ತೋಟತ್ತಾಡಿ ಆ:26
ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆಗಳು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪ್ರಧಾನ ಅರ್ಚಕರು ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಗೌರವಾಧ್ಯಕ್ಷ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮಾತನಾಡಿ ಭಗವಾನ್ ಶ್ರೀ ಕೃಷ್ಣ ಜನ್ಮಾಷ್ಟಮಿಯು ಆಚರಣೆಯು ಹಿಂದೂ ಸಮಾಜವು ಸಂಘಟಿತವಾಗಳು ನೇರವಾಗುತ್ತದೆ, ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷ ಸುದರ್ಶನ್ ಗೌಡ ಪರಾರಿ, ಕಾರ್ಯದರ್ಶಿ ಕೀರ್ತನ್ ಶೆಟ್ಟಿ ಮೂರ್ಛೆ, ಕೋಶಾಧಿಕಾರಿ ಶಿವದಾಸನ್ ಪಾಲೆತ್ತಾಡಿ, ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ,ಗ್ರಾಂ ಪಂ ಸದಸ್ಯ ಜಯಾನಂದ ಮೊದಲಾದವರಿದ್ದರು.ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು, ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ವಿಠ್ಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.

Related posts

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!