25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ ಆ. 31 ರವರೆಗೆ ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಅಳಿಯ ರಾಘವೇಂದ್ರ ಕೆದಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಲಾಗಿತ್ತು‌.

ಆ.27 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಕೇಳಿದ್ದು ನ್ಯಾಯಾಧೀಶರು ಐದು ದಿನ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ‌.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya
error: Content is protected !!