22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

ಕುವೆಟ್ಟು: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡುವುದರೊಂದಿಗೆ ಜೀವನದಲ್ಲಿ ಕೃಷ್ಣನ ಸಂದೇಶವನ್ನು ನಮ್ಮಲ್ಲಿ ಮತ್ತು ನಮ್ಮ ಮಕ್ಕಳ ಜೀವನದಲ್ಲಿ ಪಾಲನೆಯಾಗಲಿ ಎಂದು ನಾವೂರು ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಅಮ್ಮುಣ್ಣಾಯ ಮೂಡೈಲು ಹೇಳಿದರು.

ಅವರು ಶ್ರೀ ರಾಮ ಸೇವಾ ಸಮಿತಿ (ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ .ಭಜರಂಗಧಳ ಮದ್ದಡ್ಕ ಇದರ ವತಿಯಿಂದ ಆ 26 ರಂದು ಮದ್ದಡ್ಕ ರಾಮ ಭಜನಾ ಮಂದಿರದ ವಠಾರದಲ್ಲಿ ಜರಗಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದರು.

ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜಾ ಆಗಮಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ, ಕೋಶಾಧಿಕಾರಿ ಸಚಿನ್ ವರ್ಧನ್ ಮದ್ದಡ್ಕ, ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ, ಮದ್ದಡ್ಕ ಭಜರಂಗದಳ ಸಂಚಾಲಕ ವಿನೋದ್ ಶೆಣೈ ಮದ್ದಡ್ಕ ಉಪಸ್ಥಿತರಿದ್ದರು.

ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿ, ಆದಿತ್ರಿ ಮದ್ದಡ್ಕ ಪ್ರಾರ್ಥನೆ ಗೈದರು. ಉಮೇಶ್ ಕುಮಾರ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು. ಬೆಳಿಗ್ಗೆ ಶ್ರೀರಾಮ ಭಜನಾ ಮಂದಿರದಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಯಂ ರಘುರಾಮ ಭಟ್ ಮಠ ಪೂಜಾ ವೈದಿಕ ವಿಧಾನಗಳನ್ನು ನೆರವೇರಿಸಿ ಕ್ರೀಡಾ ಕೂಟಕ್ಕೆ ಚಾಲಣೆ ನೀಡಿದರು.

ಮಕ್ಕಳಿಗೆ ಮಹನೀಯರೀಗೆ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ವಿಶೇಷವಾಗಿ ಮುದ್ದು ಕೃಷ್ಣ ಸ್ಪರ್ಧೆ ಜರಗಿತು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಶ್ರೀರಾಮ ಸೇವಾ ಸಮಿತಿಯ ಎಲ್ಲಾ ಪಧಾದಿಕಾರಿಗಳು ಸರ್ವ ಸದಸ್ಯರು ಕಾರ್ಯಕ್ರಮ ಯಶಶ್ವಿಯಾಗಳು ಸಹಕರಿಸಿದರು. ರಾತ್ರಿ ಭಜನಾ ಮಂದಿರದಲ್ಲಿ ಶ್ರೀರಾಮ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು.

Related posts

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya
error: Content is protected !!