September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅನರ್ಹರಾಗಿದ್ದು ಈ ಸಮಸ್ಯೆಯ ಬಗ್ಗೆ ಪರಿಶೀಲಿಸಿ ಸದ್ರಿ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಿ ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡ, ರವರು ಕಂದಾಯ ಸಚಿವ ಕೃಷ್ಣಭೈರೇ ಗೌಡರಿಗೆ ಮನವಿಯನ್ನು ಸಲ್ಲಿಸಿದ್ದರು.


ಈ ಮನವಿಗೆ ಸ್ಪಂದಿಸಿದ ಸಚಿವರ ಸೂಚನೆಯಂತೆ ಬೆಂಗಳೂರಿನ ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿಯವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಸದ್ರಿ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಸಂಬಂಧಪಟ್ಟವರಿಗೆ ಸೂಕ್ತ ಮಾಹಿತಿ ಹಿಂಬರಹ ನೀಡುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಯವರು ಬೆಳ್ತಂಗಡಿ ತಹಶೀಲ್ದಾರರು ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಗೆ ಆದೇಶ ನೀಡಿ, ಈ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

Related posts

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya
error: Content is protected !!