25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭವು ಸೆ. 03 ರಂದು ಬೆಳಗ್ಗೆ 11 ಗಂಟೆಗೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಜರುಗಲಿದೆ.

ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದ ಶ್ರೀ ರಾಮ ಕ್ಷೇತ್ರದ ನಿರ್ಮಾತೃ ಶ್ರೀ ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಂಕಲ್ಪದಂತೆ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ಒಂಬತ್ತು ಶಾಖಾ ಮಠಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ತಮ್ಮ ಪಟ್ಟಾಭಿಷೇಕದ ದಶಮಾನೋತ್ಸವ ಸಂದರ್ಭದಲ್ಲಿ ರಾಷ್ಟ್ರೀಯ ಧರ್ಮ ಸಂಸದ್ ಮೂಲಕ ಯಶಸ್ವಿ ಕಾರ್ಯಕ್ರಮ ಆಯೋಜಿಸಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದರು. ಕಳೆದ 4 ವರ್ಷಗಳಿಂದ ಶ್ರೀ ಗುರುದೇವ ಮಠದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿದ್ದು. ಈ ವರ್ಷ ಭಟ್ಕಳ ತಾಲೂಕಿನ ಕರಿಕಲ್ ಶಾಖಾ ಮಠದಲ್ಲಿ ಕಳೆದ ಜು 21 ರಿಂದ ಆ. 30 ರವರೆಗೆ, 41 ದಿನಗಳ ಚಾತುರ್ಮಾಸ್ಯ ವ್ರತಾಚಾರಣೆ ಕೈಗೊಂಡಿರುತ್ತಾರೆ.

ಚಾತುರ್ಮಸ್ಯ ವ್ರತಾಚಾರಣೆ ಸಂದರ್ಭದಲ್ಲಿ ಯಕ್ಷಗಾನ, ತಾಳಮದ್ದಲೆ, ನಾಟಕ, ಭಾಗವತ ಸಪ್ತಾಹ ಸೇರಿದಂತೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಜನಪ್ರತಿನಿಧಿಗಳು, ಸ್ವಾಮೀಜಿಯವರ ಶಿಷ್ಯವೃಂದದವರು, ದ.ಕ., ಉಡುಪಿ, ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಯಿಂದ ಭಕ್ತರು ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದುಕೊಂಡರು. ಸೆ 03 ನೇ ಮಂಗಳವಾರದಂದು ನಡೆಯುವ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಠದ ಟ್ರಸ್ಟಿಗಳಾದ ತುಕಾರಾಮ್ ಸಾಲಿಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya
error: Content is protected !!