24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ನಾವೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಾವೂರು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್‌ ಗೌಡ , ಎನ್‌ ಹಸೈನಾರ್‌, ಬಾಲಕೃಷ್ಣ, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರವಿ ಕುಮಾರ್ , ಡಾ.ಸುಕಿರ್ತಿ ಜೈನ್ ,ಡಾ.ಪ್ರಶಾಂತ್ ಕುಮಾರ್, ಡಾ.ರಾಜ ವರ್ಮಜೈನ್, ಡಾ.ಗಂಗಾಧರ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ, ಸಿ ಎ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮೇಶ್ ಪ್ರಭುಹಾಡಿಲು, ಪಶು ಸಖಿ ಶ್ರೀಮತಿ ತುಳಸಿ ಮತ್ತು ವಸಂತ ಮೈತ್ರಿ ಕಾರ್ಯಕರ್ತ, ತೃಪ್ತಿ ಸಂಜೀವಿನಿ ಒಕ್ಕೂಟದ ಎಂ ಬಿ ಕೆ ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಶಿಬಿರದಲ್ಲಿ 350 ಕ್ಕೂ ಮಿಕ್ಕಿ ಸಾಕುನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

Related posts

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya
error: Content is protected !!