25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅನರ್ಹರಾಗಿದ್ದು ಈ ಸಮಸ್ಯೆಯ ಬಗ್ಗೆ ಪರಿಶೀಲಿಸಿ ಸದ್ರಿ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಿ ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡ, ರವರು ಕಂದಾಯ ಸಚಿವ ಕೃಷ್ಣಭೈರೇ ಗೌಡರಿಗೆ ಮನವಿಯನ್ನು ಸಲ್ಲಿಸಿದ್ದರು.


ಈ ಮನವಿಗೆ ಸ್ಪಂದಿಸಿದ ಸಚಿವರ ಸೂಚನೆಯಂತೆ ಬೆಂಗಳೂರಿನ ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿಯವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಸದ್ರಿ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಸಂಬಂಧಪಟ್ಟವರಿಗೆ ಸೂಕ್ತ ಮಾಹಿತಿ ಹಿಂಬರಹ ನೀಡುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಯವರು ಬೆಳ್ತಂಗಡಿ ತಹಶೀಲ್ದಾರರು ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಗೆ ಆದೇಶ ನೀಡಿ, ಈ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

Related posts

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!