24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭವು ಸೆ. 03 ರಂದು ಬೆಳಗ್ಗೆ 11 ಗಂಟೆಗೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಜರುಗಲಿದೆ.

ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದ ಶ್ರೀ ರಾಮ ಕ್ಷೇತ್ರದ ನಿರ್ಮಾತೃ ಶ್ರೀ ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಂಕಲ್ಪದಂತೆ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ಒಂಬತ್ತು ಶಾಖಾ ಮಠಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ತಮ್ಮ ಪಟ್ಟಾಭಿಷೇಕದ ದಶಮಾನೋತ್ಸವ ಸಂದರ್ಭದಲ್ಲಿ ರಾಷ್ಟ್ರೀಯ ಧರ್ಮ ಸಂಸದ್ ಮೂಲಕ ಯಶಸ್ವಿ ಕಾರ್ಯಕ್ರಮ ಆಯೋಜಿಸಿ ಜನಮಾನಸದಲ್ಲಿ ಉಳಿಯುವಂತೆ ಮಾಡಿದರು. ಕಳೆದ 4 ವರ್ಷಗಳಿಂದ ಶ್ರೀ ಗುರುದೇವ ಮಠದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿದ್ದು. ಈ ವರ್ಷ ಭಟ್ಕಳ ತಾಲೂಕಿನ ಕರಿಕಲ್ ಶಾಖಾ ಮಠದಲ್ಲಿ ಕಳೆದ ಜು 21 ರಿಂದ ಆ. 30 ರವರೆಗೆ, 41 ದಿನಗಳ ಚಾತುರ್ಮಾಸ್ಯ ವ್ರತಾಚಾರಣೆ ಕೈಗೊಂಡಿರುತ್ತಾರೆ.

ಚಾತುರ್ಮಸ್ಯ ವ್ರತಾಚಾರಣೆ ಸಂದರ್ಭದಲ್ಲಿ ಯಕ್ಷಗಾನ, ತಾಳಮದ್ದಲೆ, ನಾಟಕ, ಭಾಗವತ ಸಪ್ತಾಹ ಸೇರಿದಂತೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಜನಪ್ರತಿನಿಧಿಗಳು, ಸ್ವಾಮೀಜಿಯವರ ಶಿಷ್ಯವೃಂದದವರು, ದ.ಕ., ಉಡುಪಿ, ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಯಿಂದ ಭಕ್ತರು ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದುಕೊಂಡರು. ಸೆ 03 ನೇ ಮಂಗಳವಾರದಂದು ನಡೆಯುವ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ಮಾಜಿ ಸಂಸದರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಠದ ಟ್ರಸ್ಟಿಗಳಾದ ತುಕಾರಾಮ್ ಸಾಲಿಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya
error: Content is protected !!