38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28 ರಂದು ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಕುಮಾರ್ ಶೆಟ್ಟಿ ಅವರು ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಚರಣ್ ಕುಮಾರ್ ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಾರಿಜಾ ,ಶಾಲಾ ಮುಖ್ಯಶಿಕ್ಷಕರಾದ ಶ್ರೀ ಸೂರ್ಯನಾರಾಯಣ ಪುತ್ತೂರಾಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಸಿ.ಆರ್‌.ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ ಶಿಕ್ಷಕಿ ಚಿತ್ರ ರವರು ವಂದನಾರ್ಪಣೆ ಮಾಡಿದ ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಶುಭರವರು ನಿರೂಪಿಸಿದರು. ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು, ಪೋಷಕರು, ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya
error: Content is protected !!